ಮಂಗಳೂರು ದಕ್ಷಿಣ: ಕಾಂಗ್ರೆಸ್ ಟಿಕೆಟ್‍ಗಾಗಿ ವಿಶ್ವಾಸ್ ಕುಮಾರ್ ದಾಸ್ ಅರ್ಜಿ ಸಲ್ಲಿಕೆ

ಮುಂಬರುವ ವಿಧಾನಸಭಾ ಚುನಾವಣೆಗೆ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿ ಮಾಡಿ ಕಾಂಗ್ರೆಸ್ ಮುಖಂಡ ಹಾಗೂ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷ ವಿಶ್ವಾಸ್‍ಕುಮಾರ್ ದಾಸ್ ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು. ಪಕ್ಷದ ಕಾರ್ಯಕರ್ತರ ಒತ್ತಾಸೆಯಂತೆ ನಾನು ಅರ್ಜಿ ಸಲ್ಲಿಸಿದ್ದೇನೆ. ಜಿಲ್ಲೆಯಲ್ಲಿ ಹಿಂದುಳಿದ ವರ್ಗದ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವಂತೆ ಪಕ್ಷದ ಕಾರ್ಯಕರ್ತರ ಆಶಯಕೂಡ ಆಗಿದೆ ಎಂದು ವಿಶ್ವಾಸ್‍ಕುಮಾರ್ ದಾಸ್ ತಿಳಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತರು ಆಗಿರುವಂತಹ ವಿಶ್ವಾಸ್ ಕುಮಾರ್ ದಾಸ್ ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
