ವಿಟ್ಲ : ಹೊಂಡದಲ್ಲಿ ಮೃತದೇಹ ಹಾಗೂ ಮೊಬೈಲ್ ಪತ್ತೆ

ವಿಟ್ಲ: ಪುಣಚ ಗ್ರಾಮದ ನೆಲ್ಲಿಗುಡ್ಡೆ ಜರಿಮೂಲೆ ಸಮೀಪ ಹೊಂಡದಲ್ಲಿ ಮೃತದೇಹ ಹಾಗೂ ಮೊಬೈಲ್ ಪತ್ತೆಯಾದ ಘಟನೆ ನಡೆದಿದೆ. ಸೊಪ್ಪು ಸೌದೆ ತರಲು ಗುಡ್ಡಕ್ಕೆ ಹೋದ ಸ್ಥಳೀಯ ನಿವಾಸಿಗಳಿಗೆ ಮೊಬೈಲ್ ಪತ್ತೆಯಾಗಿದೆ. ಇದನ್ನು ಗಮನಿಸಿ ಅಕ್ಕಪಕ್ಕದ ನೋಡಿದಾಗ ಮೃತದೇಹ ಪತ್ತೆಯಾಗಿದ್ದು, ಭಯಗೊಂಡು ಓಡಿಹೋಗಿದ್ದಾರೆನ್ನಲಾಗಿದೆ. ಪಕ್ಕದಲ್ಲಿರುವ ಮರದಲ್ಲಿ ಬಳ್ಳಿಯೊಂದು ನೇತಾಡುತ್ತಿದ್ದು, ಮೃತದೇಹ ನೆಲದಲ್ಲಿ ಬಿದ್ದುಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
