ವಿಟ್ಲ: ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಕಳ್ಳತನಕ್ಕೆ ಯತ್ನ: ಓರ್ವ ಆರೋಪಿ ಪೊಲೀಸರ ವಶಕ್ಕೆ

ವಿಟ್ಲ: ಪಡ್ನೂರು ಗ್ರಾಮದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡದ ಶೆಟರ್ ಅನ್ನು ಗ್ಯಾಸ್ ಕಟ್ಟರ್ ಬಳಸಿ ಮುರಿಯಲು ಪ್ರಯತ್ನಿಸಿ ರಾತ್ರಿ ಕಳವು ಮಾಡಲು ಪ್ರಯತ್ನಿಸಿದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಟಿ.ಕೆ ಅಬ್ದುಲ್ (37) ಎಂದು. ಗುರುತಿಸಲಾಗಿದೆ.

ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರಾದ ನಾಗರಾಜ ಹೆಚ್ .ಇ. ರವರ ಮಾರ್ಗದರ್ಶನದಂತೆ, ವಿಟ್ಲ ಪೊಲೀಸ್ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇನ್ನು ಆರೋಪಿಗಳು ಕೃತ್ಯಕ್ಕೆ ಬಳಸಿದ ವಾಹನ ಝೈಲೋ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಮುಖ್ಯ ಆರೋಪಿ, ಸೂತ್ರದಾರ ಅಬೂಬಕ್ಕರ್ ಸಿದ್ಧೀಕ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

Related Posts

Leave a Reply

Your email address will not be published.