ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ 5ನೇ ಆರೋಪಿಯ ಬಂಧನ

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ 5ನೇ ಆರೋಪಿಯನ್ನು ವಿಟ್ಲ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಕೇರಳದ ಬಾಯಾರು ಬಳ್ಳೂರು ನಿವಾಸಿ ರಾಜ ಯಾನೆ ರಾಜೇಶ್(26) ಬಂಧಿತ ಆರೋಪಿಯಾಗಿದ್ದಾನೆ. ನೊಂದ ಯುವತಿ ಐದು ಮಂದಿಯ ಹೆಸರನ್ನು ಹೇಳಿದ್ದು, ಅಕ್ಷಯ್ ದೇವಾಡಿಗ, ಸುಕುಮಾರ ಬೆಳ್ಚಡ, ಜಯಪ್ರಕಾಶ್, ಮತ್ತು ಕಮಲಾಕ್ಷ ಎಂಬವರನ್ನು ಬಂಧಿಸಲಾಗಿತ್ತು. ತಲೆಮರೆಸಿಕೊಂಡಿದ್ದ ರಾಜನನ್ನು ಮಂಗಳವಾರ ಬಂಧಿಸಿದ್ದು, ಈ ಪ್ರಕರಣದಲ್ಲಿ ಒಟ್ಟು ಐದು ಮಂದಿಯನ್ನು ಪೊಲೀಸ್ ಇಲಾಖೆ ಬಂಧಿಸಿದೆ. ಎಲ್ಲರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
