HomeFresh Newsವಿಟ್ಲ: ಎರಡು ಅಂಗಡಿಗಳಿಗೆ ಕನ್ನ

ವಿಟ್ಲ: ಎರಡು ಅಂಗಡಿಗಳಿಗೆ ಕನ್ನ

ವಿಟ್ಲ: ವಿಟ್ಲ ಪೇಟೆ ಎರಡು ಅಂಗಡಿಗಳಿಗೆ, ವಿಟ್ಲದ ಮೇಗಿನ ಪೇಟೆಯ ಒಂದು ಅಂಗಡಿಗೆ ಶುಕ್ರವಾರ ರಾತ್ರಿ ಕಳ್ಳರು ನುಗ್ಗಿ ಹಣ ಹಾಗೂ ದಿನಸಿ ಸಾಮಾಗ್ರಿ ಕದ್ದೋಯ್ಯಿದಿದ್ದಾರೆ.

ಚುನಾವಣೆ ಹಿನ್ನಲೆ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ನಿಯೋಜನೆಗೊಳಿಸಲಾಗಿದ್ದು, ಅವರು ತಡ ರಾತ್ರಿ ಹೊತ್ತಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ, ಕಳ್ಳರು ಸಲೀಸಾಗಿ ಬಂದು ಕಳ್ಳತನ ನಡೆಸಿ, ಅಷ್ಟೇ ಸಲೀಸಾಗಿ ತಪ್ಪಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ

ವಿಟ್ಲ ಪೊಲೀಸ್ ಠಾಣೆಯ ಹಿಂಭಾಗ, ವಶ ಪಡಿಸಿಕೊಂಡ ವಾಹನಗಳನ್ನು ಸಂಗ್ರಹಿಸಿಡುವ ಸ್ಥಳವಿದ್ದು, ಅದಕ್ಕೆ ಹೋಗುವ ರಸ್ತೆಯಲ್ಲೇ ಮಹಮ್ಮದ್ ಹಾಜಿ ಮಾಲೀಕತ್ವದ ದಿನಸಿ ಅಂಗಡಿಯಿದ್ದು, ಅದಕ್ಕೆ ಕಳ್ಳರು ಕನ್ನ ಹಾಕಿದ್ದಾರೆ.

ದಿನಸಿ ಅಂಗಡಿಯಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಕಳ್ಳರ ಕೃತ್ಯ ಹಾಗೂ ಮುಖ ಚಹರೆ ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಇಬ್ಬರು ಕಳ್ಳರು ಕೃತ್ಯ ಎಸಗಿರುವುದು ಕಾಣಿಸುತ್ತಿದೆ. ದಿನಸಿ ಅಂಗಡಿಯ ಹಿಂಭಾಗದಲ್ಲಿ ಛಾವಣಿಯ ಹಂಚು ತೆಗೆದು ಒಳ ನುಗ್ಗಿರುವ ಕಳ್ಳರು, ಕ್ಯಾಶ್ ಕೌಂಟರ್ ನಲ್ಲಿದ್ದ ರೂ 8೦೦೦ ಮತ್ತು ಕಟ್ಟಿಟ್ಟಿದ್ದ ದಿನಸಿ ಸಾಮಾಗ್ರಿಯನ್ನು ಹೊತ್ತೊಯ್ದಿದ್ದಾರೆ.

ಬಳಿಕ ಪಕ್ಕದ ದೀಪಕ್ ಬೀಡಿ ಕಂಟ್ರಾಕ್ಟರ್ ನಿಸಾರ್ ವಿ.ಎಸ್. ಅವರಿಗೆ ಸೇರಿದ ಬೀಡಿ ಬ್ರ್ಯಾಂಚ್ ಹಿಂಬದಿ ಬಾಗಿಲು ಮುರಿದು, ಒಳ ನುಗ್ಗಿದ್ದ ಕಳ್ಳರು, ಸಂಪೂರ್ಣ ಜಾಲಾಡಿ ಅಲ್ಲಿದ್ದ ಚಿಲ್ಲರೆ ಹಣವನ್ನು ಕದ್ದಿದ್ದಾರೆ. ಬಳಿಕ ದೂರವಿರುವ ಮೇಗಿನ ಪೇಟೆಯಲ್ಲಿರುವ ಫೆಲಿಸ್ ಪಾಯಸ್ ಅವರಿಗೆ ಸೇರಿದ ಕೋಳಿಯ ಅಂಗಡಿಯ ಕಿಟಕಿ ಕಿತ್ತು ತೆಗೆದು ಒಳ ನುಗ್ಗಿದ ಕಳ್ಳರು, ಅಲ್ಲಿ ಕೂಡ ಒಂದಷ್ಟು ನಗದು ದೋಚಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments