ವಿಟ್ಲ: ಪಾಳು ಬಾವಿಗೆ ಬಿದ್ದ ನರಿಯ ರಕ್ಷಣೆ
ವಿಟ್ಲ: ಪುಣಚ ಸಮೀಪದ ತೋರಣಕಟ್ಟೆಯಲ್ಲಿ ಪಾಳು ಬಾವಿಯೊಂದಕ್ಕೆ ನರಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಿರುಪಯುಕ್ತವಾದ ಬಾವಿಯ ಒಳಗೆ ಆಹಾರ ಅರಸಿಕೊಂಡು ಬಂದ ನರಿ ಬಿದ್ದಿದ್ದು, ಅದರ ಕೂಗು ಕೇಳಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ. ಸಹಾಯಕ ವಲಯ ಅರಣ್ಯಾಧಿಕಾರಿ ಸೀತಾರಾಮ ನೇತೃತ್ವದಲ್ಲಿ ಸ್ಥಳೀಯ ನಿವಾಸಿ ವಾಮನ್ ನಾಯಕ್ ಎಂಬರು ಬಾವಿಗೆ ಇಳಿದು ನರಿಯನ್ನು ಗೋಣಿಗೆ ತುಂಬಿಸಿ ಮೇಲೆತ್ತುವ ಕಾರ್ಯ ಮಾಡಿದ್ದಾರೆ. ಬಳಿಕ ಸ್ಥಳೀಯ ಕೆಸಿಡಿಸಿ ಪ್ಲಾಂಟೇಶನ್ ಜಾಗದಲ್ಲಿ ಬಿಡಲಾಗಿದೆ.