HomeFresh Newsಮಾರ್ಬಲ್‌ ತುಂಬಿಕೊಂಡಿದ್ದ ಲಾರಿ ಪಲ್ಟಿ : ನಾಲ್ಕು ಜನ ಗಂಭೀರ

ಮಾರ್ಬಲ್‌ ತುಂಬಿಕೊಂಡಿದ್ದ ಲಾರಿ ಪಲ್ಟಿ : ನಾಲ್ಕು ಜನ ಗಂಭೀರ

ವಿಟ್ಲ: ಮಾರ್ಬಲ್‌ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ನಡೆದಿದೆ.

ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್‌ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.

ಮಾರ್ಬಲ್ ಅನ್ ಲೋಡ್ ಗಾಗಿ ಲಾರಿಯನ್ನು ರಿವರ್ಸ್ ತೆಗೆಯುವ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ನೀರಿನ ತೊಟ್ಟಿಗೆ ಬಿದ್ದು ಲಾರಿಯಲ್ಲಿದ್ದ ಉತ್ತರ ಭಾರತದ ಮೂಲದ ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ ಎಂದು ಮಾಹಿತಿ ಲಭಿಸಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments