ವಿಟ್ಲ: ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಗೌಡ ನಿಧನ
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ.
ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ಮೃತ ವ್ಯಕ್ತಿ.
ಕೃಷಿಕರಾಗಿದ್ದ ಉಮೇಶ್ ರವರಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ತಾಯಿ, ಅಣ್ಣ ತಮ್ಮಂದಿರನ್ನು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.