ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ- ಆರು ಮಂದಿಗೆ ಗಾಯ

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ.

ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಚಂದಳಿಕೆ ಅಪಾಯಕಾರಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಟಿ.ಟಿ ವಾಹನದಲ್ಲಿದ್ದ ಆರು ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಉಜಿರೆ ನಿವಾಸಿಗಳೆಂದು ತಿಳಿದುಬಂದಿದೆ. ಶಬರಿಮಲೆ ಯಾತ್ರೆ ಮುಗಿಸಿಕೊಂಡು ಹಿಂತಿರುಗುತ್ತಿದ್ದರು.

Related Posts

Leave a Reply

Your email address will not be published.