HomeFresh Newsವಿಟ್ಲ:ಗ್ಯಾಸ್ ಸಿಲಿಂಡರ್ ಸ್ಪೋಟ : ಮನೆ ಸಂಪೂರ್ಣವಾಗಿ ಜಖಂ

ವಿಟ್ಲ:ಗ್ಯಾಸ್ ಸಿಲಿಂಡರ್ ಸ್ಪೋಟ : ಮನೆ ಸಂಪೂರ್ಣವಾಗಿ ಜಖಂ

ವಿಟ್ಲ: ವಿಟ್ಲ ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಎಂಬುವರ ಮನೆಯಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆ ಸಂಪೂರ್ಣವಾಗಿ ಜಖಂಗೊಂಡ ದುರಂತ ಸಂಭವಿಸಿದೆ.

ಕುರುಂಬಳ ನಿವಾಸಿ ಇಸುಬು ಬ್ಯಾರಿ ಅವರ ಪುತ್ರ K. ಹಮೀದ್ (49) ಅವರ ಮನೆಯಲ್ಲಿ ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆಗೆ ಈ ದುರಂತ ಸಂಭವಿಸಿದೆ. ಮನೆ ಮಾಲಿಕ ಹಮೀದ್ ಅವರು ಪೇಟೆಗೆ ತೆರಳಿದ್ದ ಸಂದರ್ಭದಲ್ಲಿ, ಅವರ ಪತ್ನಿ ಖೈರುನ್ನಿಸಾ ಅವರು ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಗ್ಯಾಸ್ ಸಿಲಿಂಡರ್‌ನ ರೆಗ್ಯುಲೇಟರ್ ಬಳಿ ಬೆಂಕಿ ಹತ್ತಿಕೊಂಡಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಮನೆಯೊಡತಿ ಖೈರುನ್ನಿಸಾ ಬೊಬ್ಬೆ ಹೊಡೆದಿದ್ದು ಕೇಳಿಸಿಕೊಂಡ ನೆರೆಯ ನಿವಾಸಿ ಉಮ್ಮರ್ ತೋಟದಿಂದ ಓಡಿಬಂದು ಮೂವರನ್ನೂ ಅಂಗಳಕ್ಕೆ ಕರೆದೊಯ್ದು ರಕ್ಷಿಸಿದ್ದಾರೆ.

ಅವರು ಹೊರಗೆ ಬಂದ ಕೆಲವೇ ಕ್ಷಣಗಳಲ್ಲಿ ಸಿಲಿಂಡರ್ ಭೀಕರವಾಗಿ ಸ್ಪೋಟಗೊಂಡು ಛಿದ್ರಗೊಂಡಿದೆ. ಸ್ಪೋಟದ ತೀವ್ರತೆಗೆ ಮನೆಯ ಗೋಡೆಗಳು ಬಿರುಕು ಬಿಟ್ಟು, ಅಡುಗೆ ಕೋಣೆ ಸಂಪೂರ್ಣ ಧ್ವಂಸಗೊಂಡಿದೆ. ಮನೆಯಲ್ಲಿದ್ದ ಗೃಹಬಳಕೆಯ ವಸ್ತುಗಳು, ದಾಖಲೆಗಳು ಹಾಗೂ ಪೀಠೋಪಕರಣಗಳು ಗುರುತು ಹಿಡಿಯಲಾಗದಷ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಸ್ಥಳಕ್ಕೆ ಅಧಿಕಾರಿಗಳು, ಗ್ಯಾಸ್ ವಿತರಕರ ಭೇಟಿ
ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ವಿಟ್ಲದ ಇಂಡೇನ್ ಗ್ಯಾಸ್ ವಿತರಕ ‘ಸಾಯಿ ಗಣೇಶ್’ ಸಂಸ್ಥೆಯ ಮಾಲಿಕ ಸತೀಶ ಆಳ್ವ ಸೇರಿದಂತೆ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಐದು ಲಕ್ಷಕ್ಕೂ ಹೆಚ್ಚು Shop ಅಂದಾಜಿಸಲಾಗಿದೆ.

Home interiors
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments