ನೇತ್ರಜ್ಯೋತಿ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನಾಚರಣೆ
ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಪ್ಯಾರಮೆಡಿಕಲ್ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ಯುವ ದಿನಾಚರಣೆಯ ಪ್ರಯುಕ್ತ ಅಂತರ್ ಕಾಲೇಜು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉಧ್ಘಾಟಿಸಿದ ಭಾರತೀಯ ರೆಡ್ ಕ್ರಾಸ್ ಉಡುಪಿ ಘಟಕದ ಸಭಾಪತಿ ಶ್ರೀ ಬಸ್ರೂರು ರಾಜೀವ್ ಶೆಟ್ಟಿಯವರು ಮಾತನಾಡಿ ಸ್ವಾಮಿ ವಿವೇಕಾನಂದರ ತತ್ವಗಳು ಸರ್ವಕಾಲಿಕ, ಪ್ರತಿಯೊಬ್ಬರು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ವಿಷೇಶ ಉಪನ್ಯಾಸಕಿಯಾಗಿ ಆಗಮಿಸಿದ ಪ್ರಾಧ್ಯಾಪಕಿ ಡಾ. ನಿಕೇತನರವರು ಮಾನವೀಯ ಮೌಲ್ಯಗಳೇ ವಿವೇಕಾನಂದರು ಪ್ರತಿಪಾದಿಸಿದ ಮುಖ್ಯ ತತ್ವವಾಗಿದೆ ಎಂದು ತಿಳಿಸಿದರು. ನೇತ್ರಜ್ಯೋತಿ ಸಂಸ್ಥೆಗಳ ಕಾರ್ಯ ನಿರ್ವಹಣಾಧಿಕಾರಿಗಳಾದ ಡಾ. ಗೌರಿ ಪ್ರಭು ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ರೆಡ್ ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈಜಿ, ಖಜಾಂಚಿ ರಮಾದೇವಿ, ರೆಡ್ ಕ್ರಾಸ್ ಕಾರ್ಯದರ್ಶಿ ಡಾ, ಗಣನಾಥ ಶೆಟ್ಟಿ ಎಕ್ಕಾರು ಮತ್ತು ಕಾಲೇಜಿನ ಕೊರ್ಡಿನೇಟರ್ ಗಳಾದ ಶ್ರೀ ಸಚಿನ್ ಶೇಟ್, ಶ್ರೀ ಮಾಧವ ಪೂಜಾರಿ, ಉಪನ್ಯಾಸಕಿ ಶಹನಾಜ್ ಉಪಸ್ಥಿತರಿದ್ದರು. ಕಾಲೇಜಿನ ವಿಧ್ಯಾರ್ಥಿನಿಯರು ಪ್ರಾರ್ಥಿಸಿದರು ಪ್ರಾಧ್ಯಾಪಕಿ ರಕ್ಷಾ ಸ್ವಾಗತಿಸಿ, ಪ್ರಾಧ್ಯಾಪಕಿ ಸ್ವಾತಿ ವಂದಿಸಿದರು. ಆಯಿಷ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.



















