ಉಳ್ಳಾಲ ಬೀಚ್‌ನಲ್ಲಿ ಮರಳಿನ ಆಕೃತಿ ಮೂಲಕ ಮತದಾನ ಜಾಗೃತಿ

ಉಳ್ಳಾಲ ಬೀಚ್‌ನಲ್ಲಿ ತಾಲೂಕು ಪಂಚಾಯತ್ ಉಳ್ಳಾಲ ಹಾಗೂ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್, ಸೋಮೆಶ್ವರ ಪುರಸಭೆ ಸಹಭಾಗಿತ್ವದಲ್ಲಿ ಮರಳು ಆಕೃತಿ ಜತೆಗೆ ಮೇಣದ ಬತ್ತಿ ಬೆಳಗುವ ಮೂಲಕ ಮತದಾನ ಜಾಗೃತಿ ಸಭೆ ನಡೆಯಿತು.
ಕಾರ್ಯಕ್ರಮದ ಪ್ರಾರಂಭದಲ್ಲಿ ಜನಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನಶೆಟ್ಟಿ ಹಾಗೂ ಕೃಷ್ಣಪ್ಪ ಮೂಲ್ಯರು ನೆರೆದಿದ್ದವರಿಂದ ಮತದಾನ ಘೋಷಣೆ ಮೊಳಗಿಸಿದರು. ನಂತರ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್.ಕೆ ಐಎಎಸ್ ಅವರು ಬೆಲೂನ್ ಹಾರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಎಪ್ರಿಲ್ 26ಕ್ಕೆ ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಈ ನಿಟ್ಟಿನಲ್ಲಿ ಹಲವಾರು ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.ಇಲ್ಲಿ ಮರಳಿನ ಆಕೃತಿ ರಚಿಸುವ ಮೂಲಕ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಉಳ್ಳಾಲ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶೈಲಾ ಕೆ ಕಾರಿಗಿ, ರಾಘವೇಂದ್ರ ಪೌರಾಯುಕ್ತರು ಳ್ಳಾಲ ನಗರಸಭೆ, ಆನಂದ ಸೆರೆಗೊಪ್ಪ ಮುಖ್ಯ ಅಧಿಕಾರಿ ಕೋಟೆಕಾರ್ ಪಟ್ಟಣ ಪಂಚಾಯತ್, ರಾಜು ಮುಖ್ಯ ಅಧಿಕಾರಿ ಸೋಮೇಶ್ವರ ಪುರಸಭೆ ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿಗಳು,ಗ್ರಾಮ ಪಂಚಾಯತ್ ಸಿಬ್ಬಂದಿಗಳು, ನಗರ ಸಭೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
