ಉಡುಪಿ: ಶ್ರೀ ಮಧ್ಯ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ಮಂಗಳೂರು ವಿಭಾಗದ ಅಂತರ್ ಕಾಲೇಜು ಮಹಿಳೆಯರ ಮತ್ತು ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸೋದೆ ಸಮೂಹ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಕ್ರೀಡೆಯ ಮಹತ್ವವನ್ನು ವಿವರಿಸಿದರು. ಆರೋಗ್ಯಕರ ಜೀವನಶೈಲಿಯ ಭಾಗವಾಗಿ ಪ್ರತಿಯೊಬ್ಬರೂ ಯಾವುದಾದರೂ ಒಂದು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಾಗರಾಜ ಭಟ್ ಇವರು ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೆಶಕರು ಹಾಗೂ ಕ್ರೀಡಾಪಟುಗಳನ್ನು ಸ್ವಾಗತಿಸಿದರು ಮತ್ತು ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧಿಸಿ ಕ್ರೀಡೆಯ ಮೌಲ್ಯವನ್ನು ಕಾಪಾಡುವಂತೆ ತಿಳಿಸಿದರು.

ಸಮಾರೋಪ ಸಮಾರಂಭದಲ್ಲಿ ಸೋದೆ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ರಾಧಾಕೃಷ್ಣ ಎಸ್ ಐತಾಳ್, ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಾಗರಾಜ್ ಭಟ್, ಶೈಕ್ಷಣಿಕ ಡೀನ್ ಡಾ. ಸುದರ್ಶನ್ ರಾವ್, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಪೌಲ್ ಸೂರಜ್ ಮತ್ತು ಸಹಾಯಕ ದೈಹಿಕ ಶಿಕ್ಷಕಿಯಾಗಿರುವ ಶುಭಶ್ರೀ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿವಿಧ ಇಂಜಿನಿಯರಿಂಗ್ ಕಾಲೇಜಿನ ಒಟ್ಟು ಹದಿನಾಲ್ಕು ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಪುರುಷರ ವಿಭಾಗದಲ್ಲಿ ಸೈಂಟ್ ಜೋಸೆಫ್ ఇంజినియరింగా ಕಾಲೇಜು, ಮಂಗಳೂರು ಇಲ್ಲಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ, ಕೆನರಾ ಇಂಜಿನಿಯರಿಂಗ್ ಕಾಲೇಜು, ಮಂಗಳೂರು ಇಲ್ಲಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಮತ್ತು ಮಹಿಳೆಯರ ವಿಭಾಗದಲ್ಲಿ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು, ಮಂಗಳೂರು ಇಲ್ಲಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದರೆ, ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್ ಇಲ್ಲಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದರು.


