ಹೆಜಮಾಡಿ: ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಹೆಜಮಾಡಿ ಮೂಲಕ ಆಗಮಿಸಿದ ಸಂದರ್ಭದಲ್ಲಿ ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಆತ್ಮೀಯ ಸ್ವಾಗತ ನೀಡಲಾಯಿತು.
ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಭೋದ್ ಚಂದ್ರ ಹೆಜಮಾಡಿ ಅವರ ನೇತೃತ್ವದಲ್ಲಿ ನಡೆದ ಸ್ವಾಗತ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಚಿವರನ್ನು ಬರಮಾಡಿಕೊಂಡು ಶುಭಾಶಯ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶರ್ಪುದ್ದೀನ್ ಶೇಕ್, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಪ್ರಧಾನ ಕಾರ್ಯದರ್ಶಿ ಸುನಿಲ್ ಡಿ. ಬಂಗೇರ, ಕೆಪಿಸಿಸಿ ಸಂಯೋಜಕರಾದ ನವೀನ್ ಚಂದ್ರ ಶೆಟ್ಟಿ ಹಾಗೂ ಅಬ್ದುಲ್ ಅಜೀಜ್, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಕೇಶವ್ ಸಿ. ಸಾಲ್ಯಾನ್, ಹೆಜಮಾಡಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಕ್ಷಾ ಕೆ., ಹೆಜಮಾಡಿ ಹಿಂದುಳಿದ ವರ್ಗಗಳ ಕಾಂಗ್ರೆಸ್ ಅಧ್ಯಕ್ಷ ವಿಶಾಲ್ ವಿ. ಬಂಗೇರ, ವಿಕ್ರಂ ರಾಜ್ ಸುವರ್ಣ, ಸೌಮ್ಯ ರಿತೇಶ್, ಇಬ್ರಾಹಿಂ ಸನಾ, ಶರೀಫ್, ಹಸನಬ್ಬ ಹಾಗೂ ಮನೋಹರ್ ಹೆಜಮಾಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


