ಶಿರ್ವ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಕಾಪು ಯೋಜನಾ ಕಚೇರಿಯ ಬೆಳ್ಮಣ್ ವಲಯದ ಸೂಡ–ಶಿರ್ವ ಕಾರ್ಯಕ್ಷೇತ್ರದ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಶಿರ್ವದ ಹಿಂದೂ ಪ್ರೌಢಶಾಲೆಯಲ್ಲಿ ಆಯೋಜಿಸಲಾಯಿತು. ತಾಲೂಕು ಜನಜಾಗೃತಿ ಉಪಾಧ್ಯಕ್ಷರಾದ ಶ್ರೀಮತಿ ಬಬಿತಾ ಜಗದೀಶ್ ಅರಸು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಶಿರ್ವ ಪೊಲೀಸ್ ಠಾಣೆಯ ಎಎಸ್‌ಐ ಶ್ರೀ ಮೋಹನ್‌ದಾಸ್ ಹಾಗೂ ಹೆಡ್ ಕಾನ್ಸ್ಟೇಬಲ್ ಶ್ರೀ ಮಂಜುನಾಥ್ ಅವರು ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ದುಷ್ಪರಿಣಾಮಗಳು, ಅತಿಯಾದ ಮೊಬೈಲ್ ಬಳಕೆಯಿಂದ ಉಂಟಾಗುವ ಸಮಸ್ಯೆಗಳು ಹಾಗೂ ಪೋಕ್ಸೋ ಕಾಯಿದೆ ಕುರಿತು ಸವಿವರವಾಗಿ ಮಾಹಿತಿ ನೀಡಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಸಂತಿ ನಾಯ್ಕ್ ಸ್ವಾಗತಿಸಿದರು. ವಲಯ ಮೇಲ್ವಿಚಾರಕರಾದ ಶ್ರೀ ಸುಬ್ರಮಣ್ಯ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸೇವಾಪ್ರತಿನಿಧಿ ಶ್ರೀಮತಿ ರಜನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಾರ್ಯಕ್ರಮದಲ್ಲಿ ಶಿರ್ವ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜೇಶ್, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ವಿಶೇಷವಾಗಿ ವಿದ್ಯಾರ್ಥಿಗಳು ಪೊಲೀಸ್ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ, ಮಾದಕ ವ್ಯಸನ, ಮೊಬೈಲ್ ಬಳಕೆ ಹಾಗೂ ಕಾನೂನು ವಿಚಾರಗಳಿಗೆ ಸಂಬಂಧಿಸಿದ ತಮ್ಮ ಸಂದೇಹಗಳನ್ನು ಕೇಳಿ ಉತ್ತರಗಳನ್ನು ಪಡೆದುಕೊಂಡರು.

