ವಿಟ್ಲ: 94 ಹಕ್ಕು ಪತ್ರ ವಿಚಾರ: ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ದಾಂಧಲೆ ನಡೆಸಿದ ವ್ಯಕ್ತಿಗಳು

ವಿಟ್ಲ: ಮನೆ ಅಡಿಸ್ಥಳದ ಹಕ್ಕು ಪತ್ರ ಪಡೆಯುವ ವಿಚಾರದಲ್ಲಿ ನಿರೀಕ್ಷಕರ ಕಛೇರಿಯಲ್ಲಿ ಕೆಲವು ವ್ಯಕ್ತಿಗಳು ಮೇಜಿನ ಗಾಜು ಪುಡಿ ಮಾಡಿ ದಾಂಧಲೆ ನಡೆಸಿದ ಘಟನೆ ವಿಟ್ಲದ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಬಂದೋಬಸ್ತು ಕಲ್ಪಿಸಿದ್ದಾರೆ.
ವೀರಕಂಬ ನಿವಾಸಿ ಶೇಖ್ ಶಿಬಾನ್ ಎಂಬರು ಇತ್ತೀಚೆಗೆ ಸರ್ಕಾರಿ ಜಾಗದಲ್ಲಿ ನೂತನ ಮನೆ ನಿರ್ಮಾಣ ಮಾಡಿದ್ದರು. ಅಡಿಸ್ಥಳವನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವ ನಿಟ್ಟಿನಲ್ಲಿ 94ಸಿ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು.

ಕಂದಾಯ ಅಧಿಕಾರಿಗಳು ಸ್ಥಳ ತನಿಖೆಯನ್ನು ನಡೆಸಿ ವರದಿ ಸಲ್ಲಿಸುವ ಸಂದರ್ಭದಲ್ಲಿ ಮನೆ ಅರಣ್ಯ ಇಲಾಖೆಯಿಂದ ನಿರ್ಧಿಷ್ಟ ದೂರದಲ್ಲಿದ್ದು, ಅಲ್ಲಿಂದ ಅಭಿಪ್ರಾಯ ಪಡೆಯುವ ಬಗ್ಗೆ ಪತ್ರ ಬರೆದಿದ್ದಾರೆ.
ಬಿಜೆಪಿ ಮುಖಂಡ ಮಾಧವ ಮಾವೆ ಅವರು ಅಧಿಕಾರಿಗಳ ಜತೆಗೆ ಮಾತನಾಡಲು ವಿಟ್ಲದ ಅರ್ ಐ ಕಛೇರಿಗೆ ಆಗಮಿಸಿದರು. ಮಾತುಕತೆ ವೇಳೆ ಮಾಧವ ಮಾವೆ ಜತೆ ಬಂದ ಇಬ್ಬರು ವ್ಯಕ್ತಿಗಳು ಮಾತಿನ ಮಧ್ಯೆ ಆಕ್ರೋಶಿತ ವ್ಯಕ್ತಿ ಸರ್ಕಾರಿ ಅಧಿಕಾರಿಯನ್ನು ನಿಂದಿಸಿ ಮೇಜಿಗೆ ಕೈಯನ್ನು ಬಡಿದು ದಾಂಧಲೆ ನಡೆಸಿದ್ದಾನೆ. ಈ ವೇಳೆ ಮೇಜಿನ ಮೇಲೆ ಹಾಸಲಾಗಿದ್ದ ಗಾಜು ಪುಡಿ ಪುಡಿಯಾಗಿದೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪರಿಸ್ಥಿತಿ ವಿಕೋಪಕ್ಕೆ ಹೋಗಿರುವ ಮಾಹಿತಿ ಪಡೆದ ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಸೇರಿದ ಜನರನ್ನು ಹೊರಗಡೆ ಕಳಿಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

Related Posts

Leave a Reply

Your email address will not be published.