HomeFresh Newsಪಾಲಡ್ಕ : ಯುವಕನಿಂದ ಮಹಿಳೆಗೆ ಕತ್ತಿಯಿಂದ ಇರಿತ; ಆರೋಪಿ ಪೊಲೀಸ್ ವಶಕ್ಕೆ

ಪಾಲಡ್ಕ : ಯುವಕನಿಂದ ಮಹಿಳೆಗೆ ಕತ್ತಿಯಿಂದ ಇರಿತ; ಆರೋಪಿ ಪೊಲೀಸ್ ವಶಕ್ಕೆ

ಮೂಡುಬಿದಿರೆ: ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಶನಿವಾರ ನಡೆದಿದೆ.

ವಣ೯ಬೆಟ್ಟುವಿನ ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ ಸಂಜೀವಿ (ನಯನಾ ನಾಯ್ಕ್) ಇರಿತಕ್ಕೊಳಗಾದ ಎಂದು ಮಹಿಳೆ ಎಂದು ಗುರುತಿಸಲಾಗಿದ್ದು ಅವರ ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ರಾಮ್ ಮೋಹನ ನಗರ ನಿವಾಸಿ ರಾಜೇಶ್ ನಾಯ್ಕ್ ಎಂಬ ಯುವಕ ಕೃತ್ಯ ಎಸಗಿದ್ದಾನೆ.ಘಟನೆ ನಡೆದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಅವರು ಆರೋಪಿ ರಾಜೇಶ್ ನಾಯ್ಕ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments