ಫೆ. 11 ಮತ್ತು 12ರಂದು ದ.ಕ. ಮತ್ತು ಉಡುಪಿ ಜಿಲ್ಲಾ ಪುರುಷ, ಮಹಿಳೆಯರ ಪವರ್‍ ಲಿಫ್ಟಿಂಗ್ ಸ್ಪರ್ಧೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪುರುಷರ ಮತ್ತು ಮಹಿಳೆಯರ ಪವರ್ ಲಿಫ್ಟಿಂಗ್ ಸ್ಪರ್ಧೆಯು ಫೆಬ್ರವರಿ 11 ಮತ್ತು 12ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಮಿನಿ ಪುರಭವನದಲ್ಲಿ ಜರುಗಲಿದೆ ಎಂದು ದ.ಕ.ಜಿಲ್ಲಾ ಪವರ್ ಲಿಫ್ಟಿಂಗ್ ಎಸೋಸಿಯೇಶನ್ ಕಾರ್ಯದರ್ಶಿ ಮಧುಚಂದ್ರ ತಿಳಿಸಿದರು. ಅವರು ನಗರದ ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಂಗಳೂರು ಮಹಾನಗರಪಾಲಿಕೆ ಸಹಯೋಗದೊಂದಿಗೆ ಮೇಯರ್ ಕಪ್ ಪ್ರಶಸ್ತಿ ಸ್ಪರ್ಧೆ ಮಂಗಳೂರು ಬಾಲಾಂಜನೇಯ ಜಿಮ್ನಾಸಿಯಂನ ಸದಸ್ಯರನ್ನು ಒಳಗೊಂಡ 2 ತಂಡ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪವರ್ ಲಿಫ್ಟಿಂಗ್ ಎಸೋಸಿಯೇಶನ್‍ನ ಸಹಭಾಗಿತ್ವದಲ್ಲಿ ಈ ಕ್ರೀಡಾಕೂಟ ಜರಗಲಿದೆ. ಕ್ರೀಡಾ ಪ್ರೋತ್ಸಾಹಕ ಗಣ್ಯರ ಉಪಸ್ಥಿತಿಯಲ್ಲಿ ಮಂಗಳೂರು ಪಾಲಿಕೆ ಮೇಯರ್ ಜಯಾನಂದ ಅಂಚನ್ ಅವರು ಫೆ.11 ರಂದು ಬೆಳಿಗ್ಗೆ 10 ಗಂಟೆಗೆ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ.

ದ.ಕ ಮತ್ತು ಉಡುಪಿ ಜಿಲ್ಲೆಯ ಸುಮಾರು 150 ಮಂದಿ ಯುವ ಕ್ರೀಡಾಪಟು ಈ ಸ್ಪರ್ಧೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಉದಯೋನ್ಮುಖ ಯುವ ಕ್ರೀಡಾಪಟುಗಳಿಗೆ ಅವಕಾಶ ನೀಡಿ ಪ್ರೋತ್ಸಾಹಿಸುವ ಸಲುವಾಗಿ ಈ ಸ್ಪರ್ಧೆ ಜರಗುತ್ತದೆ. ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಸಾಧನೆಗೈದ ಕ್ರೀಡಾಪಟುವಿಗೆ ದ.ಕ. ಬಲಾಡ್ಯ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಗುವುದು ಎಂದರು.ಇನ್ನು ಫೆ.12 ರಂದು ಸಂಜೆ 5 ಗಂಟೆಗೆ ಬಹುಮಾನ ವಿತರಣಾ ಸಮಾರಂಭದಲ್ಲಿ ಮಂಗಳೂರು ವಿಧಾನ ಸಭಾ ಶಾಸಕ ವೇದವ್ಯಾಸ ಕಾಮತ್ ಮತ್ತಿತ್ತರ ಕ್ರೀಡಾ ಪ್ರೋತ್ಸಾಹಕ ಗಣ್ಯರು ಬಹುಮಾನ ವಿತರಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪವರ್ ಲಿಫ್ಟಿಂಗ್ ಇಂಡಿಯಾ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಮಾರ್ ಕುದ್ರೋಳಿಯವರನ್ನು ಸಮಸ್ತ ಕ್ರೀಡಾಳುಗಳ ಪರವಾಗಿ ಗೌರವಿಸಲಿದ್ದೇವೆ ಎಂದು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಅಂತರಾಷ್ಟ್ರೀಯ ಪವರ್ ಲಿಫ್ಟರ್ ದೇವದಾಸ ಕೂಳೂರು, ಕಾರ್ಯದರ್ಶಿ ಸೋರಜ್ ಶೆಟ್ಟಿ, ಖಜಾಂಚಿ ತಿಲಕ್ ರಾಜ್ , ಮೋಹನ್‍ರಾಜ್ ಮತ್ತು ಬಾಲಾಂಜನೇಯ ಜಿಮ್‍ನ ಅಧ್ಯಕ್ಷ ಉಮೇಶ್ ಗಟ್ಟಿ ಮತ್ತು ಉಪಾಧ್ಯಕ್ಷ ಜಯರಾಮ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.