ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ : “ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ” ಒಂದು ದಿನದ ಕಾರ್ಯಾಗಾರ
                                                ಉಡುಪಿ : ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ, ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಪೊಲೀಸ್ ಇಲಾಖೆ ಉಡುಪಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಉಡುಪಿ, ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ, ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬಯಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಮಣಿಪಾಲ ಮಹಿಳಾ ಸಮಾಜ ಇವರ ಸಹಯೋಗದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ “ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ” ಎಂಬ ವಿಷಯದಲ್ಲಿ ಒಂದು ದಿನದ ಕಾರ್ಯಾಗಾರ ಇಂದು ಉಡುಪಿ ಜಿಲ್ಲೆಯ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಹಿರಿಯ ಸಿವಿಲ್ ನ್ಯಾಯಾಧೀಶೆ, ರಾಜ್ಯ ಕಾನೂನು ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಶರ್ಮಿಳಾ ಎಸ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಠ್ಯ ಪುಸ್ತಕದಲ್ಲಿ ಮಾದಕ ದ್ರವ್ಯ ನಿರ್ಮೂಲನೆ ನಿಟ್ಟಿನಲ್ಲಿ ಮಾಹಿತಿ ಅಳವಡಿಕೆ ಮುಖ್ಯವಾಗಿದೆ. ಜಿಲ್ಲೆಯಲ್ಲಿ ಯುವ ಜನಾಂಗ ಮಾದಕ ದ್ರವ್ಯದತ್ತ ಹೆಚ್ವು ಆಕರ್ಷಿತರಾಗುತ್ತಿರುವುದು, ಮಾದಕ ದ್ರವ್ಯದ ಬಳಕೆ ಆತಂಕಕಾರಿ ಎಂದರು.


							
							














