ಪ್ರಕೃತಿ ಯೋಗ ಕುಟೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರಿನ ಕದ್ರಿ ಕೈಬಟ್ಟಲಿನ ಪ್ರಕೃತಿ ಯೋಗ ಕುಟೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಮನೋಹರ್ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಯೋಗಾಸನದಿಂದ ಅದ್ಭುತ ಶಕ್ತಿ ಉಂಟಾಗುತ್ತದೆ. ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.

ಎಜೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಪ್ರಶಾಂತ್ ಮಾರ್ಲ ಅವರು ಮಾತನಾಡಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯ ತಿಳಿಸಿದ ಅವರು, ಯೋಗ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಯೋಗ ಕುಟೀರದ ಸ್ಥಾಪಕರು, ಯೋಗ ಗುರುಗಳಾದ ರಾಧಾಕೃಷ್ಣ ಶೆಟ್ಟಿ ಅವರು ಯೋಗಾಭ್ಯಾಸವನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ನಿವೃತ್ತ ಸೈನಿಕ ಸೋಮಶೇಖರ್ ಶೆಟ್ಟಿ, ಮುಸ್ತಫಾ, ಶವಾಝ್, ಯೋಗ ಕುಟೀರದ ಸದಸ್ಯರು ಭಾಗವಹಿಸಿದ್ದರು.
